ಹುಬ್ಬಳ್ಳಿ: ಸ್ವಾಮೀಜಿ ನಾಲ್ಕು ಬೇಡಿಕೆ ಇಟ್ಟಿದ್ದಾರೆ. ಜೈನ ಸ್ವಾಮೀಜಿಗಳ ಯಾತ್ರೆ ವೇಳೆ ರಕ್ಷಣೆ ಕೊಡಬೇಕು ಎಂದು ಗೃಹ ಸಚಿವ ಪರಮೇಶ್ವರ್(Parameshwar) ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈನ ಸಮುದಾಯದ ಸಂಘ ಸಂಸ್ಥೆಗಳ ಲಿಖಿತ ರೂಪದಲ್ಲಿ ತಿಳಿಸಿದರೇ ನಾವು ರಕ್ಷಣೆ ಕೊಡುತ್ತೇವೆ. ಅವರು ತಂಗೋ ಜಾಗ ಅಧಿಕೃತ ಆಗಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಜೈನ ಸ್ವಾಮೀಜಿ ಶಾಲಾ ಕಾಲೇಜುಗಳಲ್ಲಿ ಉಳಿದುಕೊಳ್ಳುತ್ತಾರೆ. ಈ ವಿಚಾರವಾಗಿ ನಾನು ಮಧು ಬಂಗಾರಪ್ಪ ಜೊತೆ ಮಾತಾಡುತ್ತೇನೆ.
ಜೈನ ಮಂಡಳಿ ಮಾಡಬೇಕು ಎಂದು ಹೇಳಿದ್ದಾರೆ. ಈಗಾಗಲೇ ಹಿಂದೂಳಿದ ವರ್ಗಗಳ ನಿಮಗ ಮಂಡಳಿ ಇದೆ. ಮುಖ್ಯಮಂತ್ರಿ ಗಮನಕ್ಕೆ ತಂದು ಜೈನ ಸಮುದಾಯದ ಮಂಡಳಿ ಮಾಡೋಕೆ ಕ್ರಮ ಕೈಗೊಳ್ಳುತ್ತೇವೆ. ಬಜೆಟ್ ಮೊದಲೆ ಆಗಿದ್ದರೇ ನಾವು ಪ್ರಕಟಣೆ ಮಾಡುತ್ತಿದ್ವಿ. ಜೈನ ಮಂದಿರಗಳಿಗೆ ರಕ್ಷಣೆ ಕೊಡಬೇಕು ಎಂದಿದ್ದಾರೆ. ನಾವು ಜೈನ ಮಂದಿರಕ್ಕೆ ರಕ್ಷಣೆ ಕೊಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.