ಬೆಂಗಳೂರು ;- ನಗರದ ಮಹಾನಗರ ಸಾರಿಗೆ ಸಂಸ್ಥೆಯು ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ವಿದ್ಯಾರ್ಥಿಗಳು ಪ್ರಯಾಣಿಸಲು ಜುಲೈ 15 ರವರೆಗೆ ಅವಕಾಶ ಕಲ್ಪಿಸಲಾಗಿದೆ.
2022-23 ವಿದ್ಯಾರ್ಥಿ ಪಾಸ್ ಅಥವಾ 2023-24 ಶಾಲಾ/ಕಾಲೇಜು ಶುಲ್ಕ ರಶೀದಿ/ ಗುರುತಿನ ಚೀಟಿಯನ್ನು ತೋರಿಸುವ ಮೂಲಕ ಎಲ್ಲಾ ಸಾಮಾನ್ಯ ಸೇವೆಯಲ್ಲಿ 15-07-2023 ರವರೆಗೆ ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಈ ಸಂಬಂಧ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ರಾಜ್ಯ ಸರ್ಕಾರದ ನಿರ್ದೇಶನದಂತೆ ವಿದ್ಯಾಸಂಸ್ಥೆಗಳು 2023-24 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿರುತ್ತವೆ. ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಕೆಳಕಂಡಂತೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
1 ರಿಂದ 12 ನೇ ತರಗತಿವರೆಗೆ ಪದವಿ, ವೃತ್ತಿಪರ, ಸ್ನಾತಕೋತ್ತರ ಪದವಿ, ಸಂಜೆ ಕಾಲೇಜು, ಪಿ.ಹೆಚ್ಡಿ ವಿದ್ಯಾರ್ಥಿಗಳು 2022-23 ನೇ ಸಾಲಿನ ವಿದ್ಯಾರ್ಥಿ ಪಾಸು ಅಥವಾ 2023-24 ನೇ ಸಾಲಿನ ಶಾಲಾ, ಕಾಲೇಜಿನ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ಜುಲೈ 15ರವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.