ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ. ಎ. ಶರವಣ ಅವರಿಗೆ ಲಘು ಹೃದಯಾಘಾತ ವಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಭಿಮಾನಿಗಳೂ ಹಾಗೂ ಆತ್ಮೀಯರು ಆತಂಕ ಪಡುವ ಅಗತ್ಯವಿಲ್ಲವೆಂದು ಟ್ವೀಟ್ ಮೂಲಕ ಟಿ. ಎ. ಶರವಣ ತಿಳಿಸಿದ್ದಾರೆ. ಹೌದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಲಘು ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಗುಣಮುಖನಾಗಿದ್ದೇನೆ. ಹೃದಯದಲ್ಲಿ ಸ್ಟೆಂಟ್ ಅಳವಡಿಸಲಾಗಿದೆ. ಅಭಿಮಾನಿಗಳು ಹಾಗು ಆತ್ಮೀಯರು ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ನಿಮ್ಮೆಲ್ಲರ ಪ್ರೀತಿ, ಹಾರೈಕೆ, ಪ್ರಾರ್ಥನೆಯಿಂದ ಮತ್ತು ಭಗವಂತನ ಕೃಪೆಯಿಂದ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.