ಬೆಂಗಳೂರು: ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಅಭ್ಯರ್ಥಿಯಾಗಿ ಡಾ ಸಿ ಎನ್ ಮಂಜುನಾಥ್ ಅವರು ಅಭ್ಯರ್ಥಿಯಾಗಿ ನಿಂತಿದ್ದಾರೆ
ಇದೀಗ ಚುನಾವಣಾ ಪ್ರಚಾರ ಆರಂಭಗೊಂಡಿದ್ದು ನಿನ್ನೆ ಡಾ ಸಿ ಎನ್ ಮಂಜುನಾಥ್ ಅವರನ್ನು ಬೆಂಬಲಿಸಿ ಬೆಂಗಳೂರಿನ ಉಳ್ಳಾಲ ಮುಖ್ಯರಸ್ತೆಯಲ್ಲಿರುವ ಜಯಂತ್ ಕನ್ವೆನ್ಷನ್ ಹಾಲ್ ನಲ್ಲಿ ಜರುಗಿದ ಸಹೃದಯರ ಸಮಾವೇಶ ಕಾರ್ಯಕ್ರಮದಲ್ಲಿ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಭಾಗಿಯಾಗಿದ್ದರು.
ಸದ್ಯ ಡಿ.ಕೆ.ಸುರೇಶ್ ರಾಜ್ಯದ ಏಕೈಕ ಕಾಂಗ್ರೆಸ್ ಸಂಸದರಾಗಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಈ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಗಾಗಿ ಶೋಧದಲ್ಲಿ ತೊಡಗಿದ್ದ ಬಿಜೆಪಿ -ಜೆಡಿಎಸ್ ಮೈತ್ರಿ ಪಾಳಯದಲ್ಲಿ ಡಾ.ಮಂಜುನಾಥ್ ಸಮರ್ಥ ಅಭ್ಯರ್ಥಿ ಎಂದು ಹಾಗೆ ಡಿ.ಕೆ.ಸುರೇಶ್ ರನ್ನ ಕಟ್ಟಿ ಹಾಕಲು ಮೈತ್ರಿ ಸರ್ಕಾರ ಈ ರೀತಿ ಮಾಸ್ಟರ್ ಪ್ಲಾನ್ ಮಾಡಿದೆ.