ನವದೆಹಲಿ:- ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪದಗ್ರಹಣ ಮಾಡಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದಿರು.
ಮೋದಿ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ನರೇಂದ್ರ ಮೋದಿ ಅವರ ಜತೆಗೆ ಹಲವು ಸಂಸದರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶದಲ್ಲಿ 10 ವರ್ಷಗಳ ಬಳಿಕ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಟಿಡಿಪಿ, ಜೆಡಿಯು, ಜೆಡಿಎಸ್ ಹಾಗೂ ಎಲ್ಜೆಪಿ ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮದ ಲೈವ್ ವೀಕ್ಷಣೆಗೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಎಲ್ಇಡಿ ಪರದೆ, ಟಿವಿಗಳ ವ್ಯವಸ್ಥೆ ಮಾಡಿದ್ದರು. ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುತ್ತಲೇ ಭಾರತ್ ಮಾತಾ ಕೀ ಜೈ, ಮೋದಿ ಮೋದಿ ಎಂಬ ಘೋಷಣೆಗಳು ಮೊಳಗಿದವು. ಭಾರತದ ಸಾವಿರಾರು ಗಣ್ಯರ ಜತೆಗೆ ನೆರೆ ರಾಷ್ಟ್ರಗಳ ನಾಯಕರು ಕೂಡ ಭಾಗವಹಿಸಿದ್ದರು. ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವು 293 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ 272ರ ಮ್ಯಾಜಿಕ್ ನಂಬರ್ ಗೆರೆಯನ್ನು ದಾಟಿದೆ