ಬೆಂಗಳೂರು:- ಮೇಕೆದಾಟು ಯೋಜನೆಯ ಜಾರಿಗೆ ಸ್ಟಾಲಿನ್ ಅನುಮತಿಗಾಗಿ ಕಾದು ಕುಳಿತಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಗೆ ಸಿಎಂ ಟಾಂಗ್ ಕೊಟ್ಟಿದ್ದಾರೆ.
ಮೇಕೆದಾಟು ಯೋಜನೆಯ ಜಾರಿಗೆ ನಾವು ಎಂ.ಕೆ ಸ್ಟಾಲಿನ್ ಅವರ ಅನುಮತಿಗಾಗಿ ಕಾದು ಕುಳಿತಿಲ್ಲ, ನಮಗೆ ಅನುಮತಿ ಬೇಕಿರುವುದು ಕೇಂದ್ರ ಸರ್ಕಾರದ್ದು.
ನಿಮ್ಮದೇ ಪಕ್ಷದ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ನಾಳೆಯಿಂದಲೇ ಅಣೆಕಟ್ಟು ಕೆಲಸ ಆರಂಭ ಮಾಡಲು ನಾವು ತಯಾರಿದ್ದೇವೆ. ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ಸುಳ್ಳು ಸುದ್ದಿಯ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುವುದನ್ನು ನಿಲ್ಲಿಸಿ ಎಂದು ವಾಗ್ದಾಳಿ ಮಾಡಿದ್ದಾರೆ.
ರಾಜ್ಯ ಬಿಜೆಪಿ ನನ್ನ ಭಾವಚಿತ್ರಕ್ಕೆ ಹಳದಿ ಬಣ್ಣದ ಜೆರ್ಸಿ ಹಾಕಿ ನನ್ನ ಬದ್ಧತೆಯನ್ನು ಅವಮಾನಿಸಬೇಡಿ, “ನಾನು ಬದುಕಿರುವವರೆಗೆ ಕನ್ನಡಿಗನೆ, ಆರ್.ಸಿ.ಬಿಯ ಹೆಮ್ಮೆಯ ಅಭಿಮಾನಿಯೇ” ಎಂದು ತಿರುಗೇಟು ನೀಡಲಾಗಿದೆ