ಲಕ್ನೋ: ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ‘ದಿ ಕೇರಳ ಸ್ಟೋರಿ‘ ಸಿನಿಮಾಕ್ಕೆ ಉತ್ತರಪ್ರದೇಶದಲ್ಲಿ ತೆರಿಗೆ ಮುಕ್ತ ಮಾಡಲಿದೆ ಎಂದು ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಯುಪಿಯಲ್ಲಿ ‘ದಿ ಕೇರಳ ಸ್ಟೋರಿ’ಯನ್ನು ತೆರಿಗೆ ಮುಕ್ತಗೊಳಿಸಲಾಗುವುದು ಎಂದು ಸಿಎಂ ಯೋಗಿ ಟ್ವೀಟ್ ಮಾಡಿದ್ದಾರೆ. ಯೋಗಿ ಆದಿತ್ಯನಾಥ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಲೋಕಭವನದಲ್ಲಿ ಆಯೋಜಿಸಲಾಗಿರುವ ವಿಶೇಷ ಪ್ರದರ್ಶನದಲ್ಲಿ ಚಲನಚಿತ್ರವನ್ನು ವೀಕ್ಷಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಸಚಿವಾಲಯ ತಿಳಿಸಿದೆ.
ಕಳೆದ ವರ್ಷ, ಅಕ್ಷಯ್ ಕುಮಾರ್ ಅಭಿನಯದ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾಕ್ಕೆ ರಾಜ್ಯದಲ್ಲಿ ಚಲನಚಿತ್ರವನ್ನು ತೆರಿಗೆ ಮುಕ್ತ ಎಂದು ಘೋಷಿಸಿದ್ದರು, ಇದೀಗ ದಿ ಕೇರಳ ಸ್ಟೋರಿಗೆ ತೆಇಗೆ ಮುಕ್ತ ಎಂದು ಘೋಷಣೆ ಮಾಡಿದೆ. ಯುಪಿ ಬಿಜೆಪಿ ಕಾರ್ಯದರ್ಶಿ ರಾಘವೇಂದ್ರ ಮಿಶ್ರಾ ಅವರು ಇತ್ತೀಚೆಗೆ ಲಕ್ನೋದಲ್ಲಿ 100 ವಿದ್ಯಾರ್ಥಿನಿಯರಿಗೆ ಚಿತ್ರವನ್ನು ತೋರಿಸಿದ್ದರು. ಮಧ್ಯಪ್ರದೇಶದಲ್ಲೂ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಿದ ನಂತರ ‘ತೆರಿಗೆ ಮುಕ್ತ’ ಮಾಡಿದ ಎರಡನೇ ರಾಜ್ಯ ಉತ್ತರ ಪ್ರದೇಶವಾಗಿದೆ .