ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ಭೀಕರ ಕಾರು ಅಪಘಾತವೊಂದರಲ್ಲಿ ಕಾರು ಕಾಲುವೆಗೆ ಬಿದ್ದು ಮೂವರು ಮೃತಪಟ್ಟ ಘಟನೆ ಜರುಗಿದೆ
ರಾತ್ರಿಯೇ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದ್ದು, ಮುಂಜಾನೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ.
ಬ್ರೆಝಾ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಕೊಂಡಿದೆ. ಕಾರಿನಲ್ಲಿ ನಾಲ್ವರಿದ್ದು, ಮೂವರು ಮೃತಪಟ್ಟಿದ್ದಾರೆ. ಒಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೃತಪಟ್ಟವರು ಬೆಸ್ಕಾಂ ಸಿಬ್ಬಂದಿ ಎಂದು ತಿಳಿದುಬಂದಿದೆ. ಇವರನ್ನು ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35) ಹಾಗೂ ಬೆಸ್ಕಾಂ ಲೈನ್ಮ್ಯಾನ್ ಮಂಜಪ್ಪ (35) ಎಂದು ಗುರುತಿಸಲಾಗಿದೆ. ಕಾರು ಕಾಲುವೆಗೆ ಉರುಳುವಾಗ ಬಾಗಿಲು ತೆರೆದ ಕಾರಿನಿಂದ ಚಿಮ್ಮಿದ ಒಬ್ಬ ಪ್ರಯಾಣಿಕನ ದೇಹ ಮರದಲ್ಲಿ ಸಿಕ್ಕಿಹಾಕಿಕೊಂಡಿದೆ