ಪಾಟ್ನಾ: ಇಲ್ಲಿನ ರೈಲ್ವೆ ನಿಲ್ದಾಣದ ಬಳಿಯಿದ್ದ ಹೋಟೆಲ್ಗಳಲ್ಲಿ ಭಾರಿ ಪ್ರಮಾಣದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಹತ್ತಾರು ಜನರು ಗಾಯಗೊಂಡಿದ್ದಾರೆ. ಪಾಲ್ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದನ್ನು ನಂದಿಸುವಷ್ಟರಲ್ಲಿ ಪಕ್ಕದ ಕಟ್ಟಡಗಳಿಗೆ ಹರಡಿತು. ಹೋಟೆಲ್ ಪಾಲ್ ಮತ್ತು ಪಕ್ಕದ ಅಮೃತ್ ಹೋಟೆಲ್ನಲ್ಲಿ ಬೆಂಕಿ ಅವಘಡದಿಂದ ಸಾವಿಗೀಡಾದವರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿಯಿಂದ ರಕ್ಷಿಸಿದ ಜನರನ್ನು ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. 100% ಮತ್ತು 95% ಸುಟ್ಟ ಗಾಯಗಳೊಂದಿಗೆ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರನ್ನು, ಪೂನಂ ದೇವಿ, ಆಮ್ಲೇಶ್ ತಿವಾರಿ, ಗೋರಖ್ ಕುಮಾರ್, ಅನುರಾಗ್ ಸಿಂಗ್, ಜಿತೇಂದ್ರ ಕುಮಾರ್, ರೋಹಿತ್ ಕುಮಾರ್, ಅರವಿಂದ್ ತಿವಾರಿ ಎಂದು ಗುರುತಿಸಲಾಗಿದೆ.