ವಾಷಿಂಗ್ಟನ್: ಸೀಟ್ ಬ್ಯಾಕ್ ಫ್ರೇಮ್ಗಳನ್ನು ಭದ್ರಪಡಿಸುವ ಬೋಲ್ಟ್ಗಳು ಸುರಕ್ಷಿತ ಹಾಗೂ ಬಿಗಿಯಾಗಿಲ್ಲ ಎಂದು ಕಾರಣಕ್ಕೆ ಟೆಸ್ಲಾ ಕಂಪನಿ 3,470 ಕಾರುಗಳನ್ನ ಹಿಂದಕ್ಕೆ ಪಡೆದಿದೆ.
ಅಮೆರಿಕದಲ್ಲಿ ಬಿಡುಗಡೆ ಮಾಡಿದ `ಮಾಡೆಲ್ ವೈ’ 2ನೇ ಸಾಲಿನಲ್ಲಿರುವ ಸೀಟ್ ಬ್ಯಾಕ್ ಫ್ರೇಮ್ಗಳನ್ನು ಭದ್ರಪಡಿಸುವ ಬೋಲ್ಟ್ಗಳು ಸುರಕ್ಷಿತವಾಗಿಲ್ಲ ಎಂದು ಶನಿವಾರ ಹೇಳಿದೆ. ಈ ಹಿನ್ನೆಲೆಯಲ್ಲಿ ಕಾರುಗಳನ್ನು ಹಿಂಪಡೆಯಲಾಗಿದೆ.
ನ್ಯಾಷನಲ್ ಹೈವೇ ಟ್ರಾಫಿಕ್ ಸೇಫ್ಟಿ ಅಡ್ಮಿನಿಸ್ಟ್ರೇಷನ್ ಈ ಬಗ್ಗೆ ಪ್ರತಿಕ್ರಿಯಿಸಿ, ಸಡಿಲವಾದ ಸೀಟ್ ಫ್ರೇಮ್ ಬೋಲ್ಟ್, ಸೀಟ್ ಬೆಲ್ಟ್ ವ್ಯವಸ್ಥೆಯ ಕಾರ್ಯಕ್ಷಮತೆಯನ್ನು ಕಡಿಮೆಮಾಡುತ್ತದೆ. ಜೊತೆಗೆ ಅಪಘಾತದ ಸಮಯದಲ್ಲಿ ಗಾಯ ಹಾಗೂ ಸಾವಿನ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಎಚ್ಚರಿಕೆ ನೀಡಿದೆ.
ಈ ಬಗ್ಗೆ ಪರಿಶೀಲಿಸುವುದಾಗಿ ಟೆಸ್ಲಾ ಹೇಳಿದ್ದು, 2ನೇ ಸಾಲಿನ ಡ್ರೈವರ್ ಸೈಡ್ ಮತ್ತು ಪ್ಯಾಸೆಂಜರ್ ಸೈಡ್ ಸೀಟ್ ಬ್ಯಾಕ್ ಫ್ರೇಮ್ಗಳ ಬೋಲ್ಟ್ಗಳನ್ನು ಪರಿಶೀಲಿಸಲಾಗುತ್ತದೆ. ಅಗತ್ಯವಿದ್ದರೆ ಅವುಗಳನ್ನು ಬಿಗಿಗೊಳಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದೆ.