ಮುಂಬೈ: ಏಕನಾಥ್ ಶಿಂಧೆ ಬಣ ನಿಜವಾದ ಶಿವಸೇನೆ. ಏಕನಾಥ್ ಶಿಂಧೆ ನಾಯಕತ್ವ ಸಾಂವಿಧಾನಿಕವಾಗಿದೆ ಎಂದು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ತಿಳಿಸಿದ್ದಾರೆ. ಶಿವಸೇನೆ ಅನರ್ಹತೆಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಆದೇಶ ಪ್ರಕಟಿಸಿದ್ದಾರೆ. ಉದ್ಧವ್ ಠಾಕ್ರೆಗೆ ಏಕನಾಥ್ ಶಿಂಧೆಯನ್ನು ಅನರ್ಹ ಮಾಡುವ ಅಧಿಕಾರ ಇಲ್ಲ.
ಉದ್ಧವ್ ಠಾಕ್ರೆ ನಾಯಕತ್ವ ಅವರ ಪಕ್ಷದ ಇಚ್ಛೆಯಂತೆ ಇಲ್ಲ. ಹೀಗಾಗಿ ಅವರ ಆದೇಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 1999 ಶಿವಸೇನೆ ಪಕ್ಷದ ಸಂವಿಧಾನವೇ ಅಧಿಕೃತ. ಉದ್ಧವ್ ಠಾಕ್ರೆಗೆ ಶಾಸಕರ ಬೆಂಬಲ ಇಲ್ಲ. 2018 ರ ಪಕ್ಷದ ಹೊಸ ಸಂವಿಧಾನ ಚುನಾವಣಾ ಆಯೋಗದಲ್ಲಿಲ್ಲ. ಹೀಗಾಗಿ ಚುನಾವಣಾ ಆಯೋಗದ ದಾಖಲೆಗಳ ಪ್ರಕಾರ 1999 ಸಂವಿಧಾನ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.