ಬೆಂಗಳೂರು: ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ (Kempegowda Airport)ಪ್ರಯಾಣಿಕರಿಂದ ಸುಲಿಗೆ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಅನಾರೋಗ್ಯ ಪೀಡಿತ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ ಎಂದು ಪ್ರಯಾಣಿಕರಿಂದ ಆರೋಪಿ ಹಣ ಸುಲಿಗೆಗೆ ಯತ್ನಿಸಿದ್ದ.
ಈತನ ನಡವಳಿಕೆಯನ್ನು ಕಂಡ ಕೆಲವರು ಅನುಮಾನಗೊಂಡ ಪೊಲೀಸರಿಗೆ ಮಾಹಿತಿ ನೀಡಿದ್ದರು. ದೂರುಗಳ ನಂತರ, ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಆರೋಪಿ ವಿಘ್ನೇಶ್ನನ್ನು ಚೆನ್ನೈನಿಂದ ಕಸ್ಟಡಿಗೆ ತೆಗೆದುಕೊಂಡಿದ್ದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಭಾನುವಾರ ಆತನ ವಿರುದ್ಧ ಸೆಕ್ಷನ್ 420 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.