ಬೆಂಗಳೂರು ;– ಹುಡುಗಿ ಕೈ ಕೊಟ್ಟ ಹಿನ್ನೆಲೆ ಡೆತ್ ನೋಟ್ ನಲ್ಲಿ ಪ್ರಿಯತಮೆ ಹೆಸರು ಬರೆದಿಟ್ಟು ಯುವಕ ಆತ್ಮಹತ್ಯೆ ಶರಣಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
27 ವರ್ಷದ ನವೀನ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ನಗರದ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ನಿನ್ನೆ ಸಂಜೆ ಹೊತ್ತಿಗೆ ನವೀನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ನವೀನ್ ಕುಟುಂಬಸ್ಥರು ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.