ಬೆಂಗಳೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ಅಭಿವೃದ್ದಿ ವಿರೋಧಿಯಾಗಿದೆ ಎಂದು ಪರಿಷತ್ ಸದಸ್ಯ ಟಿ.ಎ.ಶರವಣ ಅವರು ವಿರೋಧಿಸಿದ್ದಾರೆ.
ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ಅಭಿವೃದ್ದಿ ವಿರೋಧಿ, ರಾಜ್ಯದ ಜನರ ಹಿತವನ್ನು ಕಿಂಚಿತ್ತು ಚಿಂತಿಸಿದೆ ಮಾನ್ಯ ಮುಖ್ಯಮಂತ್ರಿಗಳು ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಜನರನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದ್ದಾರೆ ಅಷ್ಟೇ ಅಲ್ಲದೆ ಪಂಚ ಗ್ಯಾರೆಂಟಿಗಳಿಂದ ಯಾವುದೇ ಪ್ರಯೋಜನ ಕೂಡ ಆಗಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ
ಅಷ್ಟೇ ಅಲ್ಲದೇ ನೀರಾವರಿ ಪೂರ್ಣಗೊಳಿಸಲು ಯಾವುದೇ ಅನುದಾನವನ್ನು ಕೂಡ ಮೀಸಲಿಟ್ಟಿಲ್ಲ ಹಾಗಿದ್ದರೆ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಾದರೂ ಹೇಗೆ? ಈ ಜನ ವಿರೋಧಿ ಬಜೆಟ್ಟನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದರು.