ಬೆಂಗಳೂರು: ಐಸಿಸ್ ಉಗ್ರರ ಜೊತೆಗಿನ ನಂಟು ಪ್ರಕರಣಕ್ಕೆ (ISIS Network Case) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಕರ್ನಾಟಕದ ಬೆಂಗಳೂರು ಸೇರಿದಂತೆ 4 ರಾಜ್ಯಗಳಲ್ಲಿ 4 ರಾಜ್ಯಗಳಾದ್ಯಂತ ಸುಮಾರು 20 ಸ್ಥಳಗಳಲ್ಲಿ ದಾಳಿ ನಡೆಸಿದೆ.
ಕರ್ನಾಟಕದ 11 ಸ್ಥಳಗಳು, ಜಾರ್ಖಂಡ್ನ 4, ಮಹಾರಾಷ್ಟ್ರದ 3 ಮತ್ತು ದೆಹಲಿಯ 1 ಸ್ಥಳಗಳಲ್ಲಿ ಅಧಿಕಾರಿಗಳ ತಂಡ ದಾಳಿ (NIA Raid) ನಡೆಸಿದೆ. ಕರ್ನಾಟಕದಲ್ಲಿ ಬೆಂಗಳೂರಿನ ಆರ್.ಸಿ ನಗರ, ಹೆಬ್ಬಾಳ, ಪುಲಿಕೇಶಿ ನಗರ, ಶಿವಾಜಿ ನಗರ, ಜೆ.ಸಿ. ನಗರದ ಚಿನ್ನಪ್ಪ ಗಾರ್ಡನ್ ಸೇರಿದಂತೆ ಹಲವು ಕಡೆ ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದಾರೆ. ಬಳ್ಳಾರಿಯಲ್ಲಿಯೂ ಒಟ್ಟು 9 ತಂಡಗಳು ಕಾರ್ಯಾಚರಣೆ ನಡೆಸಿವೆ.