ಬೆಂಗಳೂರು: ಇಂದು ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ಮಹತ್ವದ ಯೋಜನೆಗಳಿಗೆ ಹಾಗೂ ಸಾಮಾನ್ಯ ವರ್ಗಕ್ಕೆ ಹೆಚ್ಚುನ ಅನುದಾನವನ್ನು ನೀಡಿದೆ. ಕೃಷಿ, ಮಹಿಳಾ, ಕೈಗಾರಿಕೆ, ರೈಲ್ವೆ, ಹೀಗೆ ಅನೇಕ ಕ್ಷೇತ್ರಗಳಿಗೆ ಭರಪೂರ ಅನುದಾನ ಹಾಗೂ ಯೋಜನೆಯಲ್ಲಿ ನೀಡಿದೆ
ಆದರೆ ವಿತ್ತ ಸಚಿವೆ ದಾಖಲೆಯ 7ನೇ ಬಾರಿ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ತಾವು ಆಯ್ಕೆಯಾದ ಕರ್ನಾಟಕವನ್ನೇ ನಿರ್ಲಕ್ಷಿಸಿದ್ದಾರೆ ಎಂಬ ಆರೋಪ ಇದೀಗ ಎಲ್ಲೆಡೆ ಕೇಳಿ ಬರುತ್ತಿದೆ.
ಹೌದು…..ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿದ ಬಜೆಟ್ ನಲ್ಲಿ ಹೈದರಾಬಾದ್-ಕರ್ನಾಟಕ ಕಾರಿಡಾರ್ ಯೋಜನೆ ಪ್ರಕಟಿಸಿದ್ದು ಬಿಟ್ಟರೆ ಯಾವುದೇ ಘೋಷಣೆ ಮಾಡಿಲ್ಲ.
ಕರ್ನಾಟಕಕ್ಕೆ ಬಹುಬೇಡಿಕೆಯ ರೈಲ್ವೆ ಯೋಜನೆ ಆಗಲಿ, ನೀರಾವರಿ ಯೋಜನೆಗಾಗಲಿ ಯಾವುದೇ ಘೋಷಣೆ ಮಾಡಲಾಗಿಲ್ಲ. ಬದಲಾಗಿ ಕೆರೆ ಹೂಳೆತ್ತುವ ಯೋಜನೆಗೆ ನೆರವು ಮತ್ತು ರಾಜ್ಯಗಳ ಮೂಲಭೂತ ಸೌಕರ್ಯಕ್ಕಾಗಿ 50 ವರ್ಷದವರೆಗೆ 1.5 ಲಕ್ಷ ಕೋಟಿವರೆಗೆ ತೆರಿಗೆ ರಹಿತ ಸಾಲ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಆದರೆ ಇದು ಇಡೀ ದೇಶಕ್ಕೆ ಅನ್ವಯ ಆಗುವುದರಿಂದ ರಾಜ್ಯಕ್ಕೆ ಎಷ್ಟು ಸಿಗುತ್ತದೆ ಎಂಬದು ಊಹಿಸಲು ಸಾಧ್ಯವೇ ಇಲ್ಲ.