ಬೆಂಗಳೂರು ;– ರಾಜ್ಯಕ್ಕೆ ಅಕ್ಕಿ ಕೊಡಲು ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಬೆಂಗಳೂರಿನ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ನಿರಾಕರಿಸುತ್ತಿದೆ. ಕೇಂದ್ರ ಸರ್ಕಾರ ಬಡವರ ವಿರೋಧಿ ಸರ್ಕಾರ. ಇದರ ವಿರುದ್ಧ ನಾವು ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಬೆಂಗಳೂರು ನಗರದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ನಾನೂ ಪಾಲ್ಗೊಳ್ಳುತ್ತೇನೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇನ್ನು ಸಂಸದ ಡಿ.ಕೆ.ಸುರೇಶ್ಗೆ ಯಾವುದೇ ವೈರಾಗ್ಯ ಇಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಆರ್. ಅಶೋಕ್ ಹೇಳಿಕೆಗೆ ಟಾಂಗ್ ನೀಡಿದರು.