ನವದೆಹಲಿ: ಜಮ್ಮು ಕಾಶ್ಮೀರದ ತೆಹ್ರೀಕ್-ಎ-ಹುರಿಯತ್ ಸಂಘಟನೆಯನ್ನು ಕಾನೂನುಬಾಹಿರ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಸಂಘಟನೆಯನ್ನು ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಅಡಿ ಕಾನೂನುಬಾಹಿರ ಸಂಘಟನೆ ಎಂದು ಅಮಿತ್ ಶಾ ಘೋಷಣೆ ಮಾಡಿದ್ದಾರೆ.
ಕೇಂದ್ರ ಸರ್ಕಾರದ ನಿರ್ಧಾರವನ್ನು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ ಅಮಿತ್ ಶಾ ಅವರು,ತೆಹ್ರೀಕ್-ಎ-ಹುರಿಯತ್ ಸಂಘಟನೆ ಭಾರತದಿಂದ ಜಮ್ಮು ಕಾಶ್ಮೀರವನ್ನು ಪ್ರತ್ಯೇಕಿಸಲು ಮತ್ತು ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು ನಿಷೇಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಈ ಗುಂಪು ಭಾರತ-ವಿರೋಧಿ ಪ್ರಚಾರವನ್ನು ಹರಡುತ್ತಿದೆ.
ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸಿ, ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರಮೋದಿ ಅವರು ಭಯೋತ್ಪಾದನೆಯ ವಿರುದ್ಧ ಶೂನ್ಯ-ಸಹಿಷ್ಣು ನೀತಿಯನ್ನು ಪಾಲಿಸುತ್ತಿದ್ದಾರೆ. ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಯನ್ನು ತಕ್ಷಣವೇ ತಡೆಯುತ್ತೇವೆ ಎಂದು ತಿಳಿಸಿದ್ದಾರೆ.