ಮೈಸೂರು ;- ವರ್ಗಾವಣೆ ದಂಧೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಸಂಬಂಧ ಮೈಸೂರಿನಲ್ಲಿ ಮಾತನಾಡಿದ ಅವರು, ಪೆನ್ ಡ್ರೈವ್ ಹೊರಗೆ ಬಂದರೆ ಮಂತ್ರಿ ರಾಜೀನಾಮೆ ನೀಡಬೇಕಾಗುತ್ತದೆ. ಸೂಕ್ತ ಸಮಯದಲ್ಲಿ ಪೆನ್ ಡ್ರೈವ್ ನಲ್ಲಿರುವ ದಾಖಲೆ ಬಿಡುಗಡೆ ಮಾಡ್ತೀನಿ ಎಂದರು.
ಈ ಸರ್ಕಾರ ಏನು ಮಾತನಾಡುತ್ತದೆಯೋ ಎಲ್ಲವನ್ನು ಮಾತನಾಡಲಿ. ನನ್ನನ್ನು ಹಿಟ್ ಅಂಡ್ ರನ್ ಎಂದು ಹೇಳಿಕೊಳ್ಳಲಿ. ಕಾಂಗ್ರೆಸ್ ಹೀಗೆ ಮಾತನಾಡುತ್ತಿರಲಿ ಎಂದು ಹೇಳಿದ್ದಾರೆ.
ಸಮಯ ಬಂದಾಗ ಪೆನ್ ಡ್ರೈವ್ ಬಿಡುಗಡೆ ಮಾಡುತ್ತೇನೆ. ಪೆನ್ ಡ್ರೈವ್ ಮಾಹಿತಿ ಹೊರಗೆ ಬಂದರೆ ಮಂತ್ರಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ವರ್ಗಾವಣೆ ದಂಧೆ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.