ಬೆಂಗಳೂರು ;- ಎಣ್ಣೆ ಏಟಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಡಿವೈಡರ್ ಗೆ ಡಿಕ್ಕಿ ಹೊಡೆದು ಚಾಲಕ ಎಸ್ಕೇಪ್ ಆಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಮೈಸೂರು ರಸ್ತೆ ನಾಯಂಡಹಳ್ಳಿ ಜಂಕ್ಷನ್ ಬಳಿ ಘಟನೆ ಜರುಗಿದೆ. ಎಣ್ಣೆ ಮತ್ತಿನಲ್ಲಿ ಕಾರು ಚಾಲನೆ ಮಾಡುತ್ತಿದ್ದ ಚಾಲಕ, ಬಳಿಕ ಡಿವೈಡರ್ ಗೆ ಹೋಗಿ ಗುದ್ದಿದ್ದಾನೆ. ಡಿಕ್ಕಿ ರಭಸಕ್ಕೆ ಡಿವೈಡರ್ ಮೇಲೆ ಹತ್ತಿ ಕಾರು ನಿಂತಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪ್ರಯಾಣಿಕರು ಪಾರಾಗಿದ್ದು, ಅಪಘಾತದ ಬಳಿಕ ಕಾರು ಬಿಟ್ಟು
ಚಾಲಕ ಎಸ್ಕೇಪ್ ಆಗಿದ್ದಾನೆ.
ಘಟನೆ ಸಂಬಂಧ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.