18ನೇ ಲೋಕಸಭೆಯ ಮೊದಲ ಅಧಿವೇಶನ ದ ಮೂರನೇ ದಿನವಾದ ಇಂದು ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾಯಿತು. ಇಂದು ಸ್ಪೀಕರ್ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಓಂ ಬಿರ್ಲಾ ಅವರು ಎರಡನೇ ಬಾರಿ ಲೋಕಸಭೆಯ ಸ್ಪೀಕರ್ ಆಗಿ ಚುನಾಯಿತರಾಗಿದ್ದಾರೆ.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ವಿಪಕ್ಷ ನಾಯಕ ರಾಹುಲ್ ಗಾಂಧಿ ಪರಸ್ಪರ ಹಸ್ತಾಲಾಘವ ಮಾಡಿದ ಅಪರೂಪದ ಕ್ಷಣಗಳಿಗೆ ಇಡೀ ಸದನವೇ ಸಾಕ್ಷಿ ಆಯಿತು.
ಓಂ ಬಿರ್ಲಾ ಅವರು ಸ್ಪೀಕರ್ ಆಗಿ ಚುನಾಯಿತರಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ವಿಪಕ್ಷ ನಾಯಕರ ರಾಹುಲ್ ಗಾಂಧಿ ತಮ್ಮ ತಮ್ಮ ಸ್ಥಾನಗಳಿಂದ ಎದ್ದು ಬಂದು ಓಂ ಬಿರ್ಲಾ ಅವರನ್ನು ಸ್ವಾಗತಿಸಿದರು. ಈ ವೇಳೆ ಪರಸ್ಪರ ಶೇಕ್ ಹ್ಯಾಂಡ್ ಮಾಡಿಕೊಂಡರು. ಬಳಿಕ ಓಂ ಬಿರ್ಲಾ ಅವರನ್ನು ಅವರ ಸೀಟ್ವರೆಗೆ ಕರೆದೊಯ್ದರು.