ಕಾಟೇರ ಸಿನಿಮಾದ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಡೆವಿಲ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಮೊದಲ ಹಂತದ ಚಿತ್ರೀಕರಣವು ಇದೇ ಸೋಮವಾರದಿಂದ ಬೆಂಗಳೂರಿನ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಲಿದ್ದು, ಅದಕ್ಕೂ ಮುನ್ನ ಚಿತ್ರತಂಡ ಕುಕ್ಕೆ ಸುಬ್ರಮಣ್ಯಂ ಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದೆ.
ಈಗಾಗಲೇ ‘ಡೆವಿಲ್’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿ ಸಖತ್ ಸದ್ದು ಮಾಡುತ್ತಿದೆ. ದರ್ಶನ್ ಹುಟ್ಟುಹಬ್ಬದ ದಿನ ಫ್ಯಾನ್ಸ್ಗೆ ಇದೊಂದು ಸರ್ಪ್ರೈಸ್ ಗಿಫ್ಟ್ ಆಗಿತ್ತು. ದರ್ಶನ್ ‘ಡೆವಿಲ್’ನಲ್ಲಿ ವಿಭಿನ್ನ ಲುಕ್ನಲ್ಲಿ ಕಾಣಿಸ್ಕೊಂಡಿದ್ದಾರೆ. ಇದೀಗ ಚಿತ್ರತಂಡ ಕುಕ್ಕೆಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ದರ್ಶನ್ ಹುಟ್ಟುಹಬ್ಬದ ದಿನವೇ ‘ಡೆವಿಲ್’ ಚಿತ್ರದ ಫಸ್ಟ್ ಲುಕ್ ರಿವೀಲ್ ಆಯ್ತು. ಅಬ್ಬರಿಸುವ ಡೈಲಾಗ್ ಮೂಲಕ ದಚ್ಚು ಎಂಟ್ರಿ ಬಹಳ ಕುತೂಹಲಕಾರಿಯಾಗಿತ್ತು. ‘ನಮ್ಮ ಮನೆಯಲೊಂದು ಪುಟ್ಟ ಪಾಪು ಇರುವುದು’ ಎಂಬ ವಿಭಿನ್ನ ಡೈಲಾಗ್ ಹೇಳುವ ಮೂಲಕ ದರ್ಶನ್ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದ್ದು ಇದೀಗ ಚಿತ್ರತಂಡ ದೇವರ ಆಶೀರ್ವಾದ ಪಡೆದು ಚಿತ್ರೀಕರಣ ಆರಂಭಿಸಲು ಮುಂದಾಗಿದೆ.