18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಚಾಲನೆ ಸಿಗಲಿದೆ. ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳು ಹಂಗಾಮಿ ಸ್ಪೀಕರ್ ಒಡಿಶಾದ ಬಿಜೆಪಿ ಸಂಸದ ಭತೃಹರಿ ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಸೋಮವಾರ ಮತ್ತು ಮಂಗಳವಾರ ನೂತನ ಸಂಸದರು ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮೊದಲ ದಿನ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಮಂತ್ರಿಗಳು ಸೇರಿ 280 ಸಂಸದರ ಪ್ರತಿಜ್ಞಾವಿಧಿ ನಡೆಯಲಿದೆ. ಉಳಿದವರಿಗೆ ನಾಡಿದ್ದು ಪ್ರಮಾಣವಚನ ಬೋಧಿಸಲಾಗುತ್ತದೆ.
ಜೂನ್ 26ಕ್ಕೆ ಸ್ಪೀಕರ್ ಸ್ಥಾನಕ್ಕೆ ಎಲೆಕ್ಷನ್ ನಡೆಯಲಿದೆ. ಸ್ಪೀಕರ್ ಸ್ಥಾನಕ್ಕೆ ಮತ್ತೆ ಓಂ ಬಿರ್ಲಾ ಹೆಸರು ಕೇಳಿಬರುತ್ತಿದೆ. ಡೆಪ್ಯೂಟಿ ಸ್ಪೀಕರ್ ಸ್ಥಾನಕ್ಕೆ ವಿಪಕ್ಷಗಳು ಬೇಡಿಕೆ ಇಟ್ಟಿವೆ. ಜೂನ್ 27 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಿರೀಕ್ಷೆಯಂತೆಯೇ ನೀಟ್ ಹಗರಣದ ಅಸ್ತ್ರವನ್ನು ಝಳಪಿಸಲು ವಿಪಕ್ಷಗಳು ಸಜ್ಜಾಗಿವೆ.
ಹಂಗಾಮಿ ಸ್ಪೀಕರ್ ಆಗಿ ಭತೃಹರಿ ನೇಮಕವಾಗಿದ್ದಕ್ಕೆ ವಿಪಕ್ಷಗಳು ಈಗಾಗಲೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಕೇರಳ ಕಾಂಗ್ರೆಸ್ ಸದಸ್ಯ ಕೆ.ಸುರೇಶ್ ಅವರು 8 ಬಾರಿ ಸಂಸದರಾಗಿ ಆಯ್ಕೆ ಆಗಿದ್ದಾರೆ. ಲೋಕಸಭೆಯ ಹಿರಿಯ ಸದಸ್ಯರಾಗಿರುವ ಕಾರಣ ಅವರಿಗೆ ಹಂಗಾಮಿ ಸ್ಪೀಕರ್ ಸ್ಥಾನ ನೀಡಬೇಕಿತ್ತು ಎಂದು ಆಗ್ರಹಿಸಿವೆ.
ವಿಪಕ್ಷಗಳ ಆಗ್ರಹಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಕಿರಣ್ ರಿಜಿಜು ಪ್ರತಿಕ್ರಿಯಿಸಿ, ಭತೃಹರಿ ಅವರು ಸತತ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಆದರೆ ಸುರೇಶ್ ಅವರು 1998 ಮತ್ತು 2004ರ ಚುನಾವಣೆಯಲ್ಲಿ ಸೋತಿದ್ದಾರೆ. ಈಗ ಅವರು ಸತತ 4 ಬಾರಿ ಜಯಗಳಿಸಿದ್ದಾರೆ ಎಂದು ತಿಳಿಸಿದ್ದರು. ಸುರೇಶ್ ಅವರು ಕೇರಳದ