ಮಹಿಳೆಯರು ತಮ್ಮ ಹಳ್ಳಿಗಳಲ್ಲಿ ಸಣ್ಣ ಉದ್ಯಮಗಳನ್ನು ಪ್ರಾರಂಭಿಸಲು ಪ್ರೋತ್ಸಾಹಿಸುವುದು ಈ ಲಖ್ಪತಿ ದೀದಿ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಮಹಿಳೆಯರು ಸ್ವಾವಲಂಭಿಯಾಗಿ ಬದುಕಬೇಕು ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಮಹಿಳೆಯರಿಗೆ ಸಾಕಷ್ಟು ನೆರವು ನೀಡುತ್ತಿದೆ. ಅಂತೆಯೇ ಕೇಂದ್ರ ಸರ್ಕಾರವು ಮಹಿಳೆಯರಿಗೆ ಲಕ್ ಪತಿ ದೀದಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ರೆ 5 ಲಕ್ಷ ರೂಪಾಯಿಗಳವರೆಗೆ ಸಾಲ ನೀಡುತ್ತಿದೆ.
ಇದು ಬಡ್ಡಿ ರಹಿತವಾಗಿದ್ದು ಯಾವುದೇ ಬಡ್ಡಿ ನೀಡುವ ಅವಶ್ಯಕತೆ ಇರುವುದಿಲ್ಲ.. ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಉದ್ಯಮಶೀಲತೆ ಕ್ಷೇತ್ರದಲ್ಲಿ ಅವರನ್ನು ಮುಂದೆ ತರುವುದು ಲಕ್ ಪತಿ ದೀದಿ ಯೋಜನೆಯ ಉದ್ದೇಶವಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆಯಡಿ, ದೇಶಾದ್ಯಂತ ಹಳ್ಳಿಗಳಲ್ಲಿ 3 ಕೋಟಿ ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲಾಗುತ್ತದೆ.
ಇದಲ್ಲದೆ, ಈ ಯೋಜನೆಯಡಿ (ಲಖ್ಪತಿ ದೀದಿ ಯೋಜನೆ) ಮಹಿಳೆಯರು ಯಾವುದೇ ಬಡ್ಡಿಯಿಲ್ಲದೆ 1 ಲಕ್ಷದಿಂದ 5 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಪಡೆಯುತ್ತಾರೆ. ಇದರೊಂದಿಗೆ, ಸರ್ಕಾರವು ಅವರಿಗೆ ಉತ್ತಮ ಮಾರುಕಟ್ಟೆ ಬೆಂಬಲವನ್ನು ಒದಗಿಸುತ್ತದೆ. ಇದಕ್ಕಾಗಿ, ಮಹಿಳೆಯರು ಸ್ವಸಹಾಯ ಗುಂಪುಗಳೊಂದಿಗೆ ಸಂಬಂಧ ಹೊಂದಿರುವುದು ಅವಶ್ಯಕ. ಅಲ್ಲಿ ಅವರಿಗೆ ಸರ್ಕಾರವು ಆರ್ಥಿಕ ಮತ್ತು ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ನೀಡುತ್ತದೆ ಮತ್ತು ತಂತ್ರಜ್ಞಾನದ ಬಳಕೆಯ ಬಗ್ಗೆಯೂ ತಿಳಿಸಲಾಗುತ್ತದೆ.
ಲಖ್ಪತಿ ದೀದಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ವಯಸ್ಸಿನ ಮಿತಿ ಇಲ್ಲ. ಎಲ್ಲಾ ಭಾರತೀಯ ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದ್ದು, ಇದಕ್ಕಾಗಿ, ಮಹಿಳೆಯರು ತಮ್ಮ ರಾಜ್ಯದ ‘ಸ್ವಸಹಾಯ ಗುಂಪು’ ಗೆ ಸೇರಬೇಕಾಗುತ್ತದೆ. ಲಕ್ ಪತಿ ದೀದಿ ಯೋಜನೆ ಅಡಿಯಲ್ಲಿ ಹಣ ಪಡೆಯುವ ಮಹಿಳೆಯರು ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಅಡ್ರಸ್ ಪ್ರೂಫ್, ಆದಾಯ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿ, ಬ್ಯಾಂಕ್ ಖಾತೆ ವಿವರಗಳು, ಪಾಸ್ಪೋರ್ಟ್ ಫೋಟೋ, ಇಮೇಲ್ ಐಡಿಯನ್ನು ಕೊಡಬೇಕಿದೆ.
ಈ ಯೋಜನೆಯ ಪ್ರಯೋಜನ ಪಡೆಯಲು, ನೀವು ‘ಸ್ವಸಹಾಯ ಗುಂಪು’ ಗೆ ಸೇರಬೇಕು, ನೀವು ‘ಸ್ವಸಹಾಯ ಗುಂಪು’ ವ್ಯವಹಾರ ಯೋಜನೆಯನ್ನು ಸಿದ್ಧಪಡಿಸಬೇಕು, ವ್ಯವಹಾರ ಯೋಜನೆಯನ್ನು ಸಿದ್ಧಪಡಿಸಿದ ನಂತರ, ಸ್ವಸಹಾಯ ಗುಂಪು ಈ ಯೋಜನೆ ಮತ್ತು ಅರ್ಜಿಯನ್ನು ಸರ್ಕಾರಕ್ಕೆ ಕಳುಹಿಸುತ್ತದೆ. ಇದರ ನಂತರ, ಸರ್ಕಾರವು ಈ ಅರ್ಜಿಯನ್ನು ಪರಿಶೀಲಿಸುತ್ತದೆ., ಅರ್ಜಿಯನ್ನು ಸ್ವೀಕರಿಸಿದರೆ ನೀವು ಈ ಯೋಜನೆಯ ಲಾಭವನ್ನು ಪಡೆಯಬಹುದು., ಈ ಯೋಜನೆಯಡಿ, ಅನೇಕ ರಾಜ್ಯಗಳಲ್ಲಿ 5 ಲಕ್ಷ ರೂ.ಗಳ ಬಡ್ಡಿರಹಿತ ಸಾಲವನ್ನು ಸಹ ನೀಡಲಾಗುತ್ತದೆ. ಈ ಮೂಲಕ ಮಹಿಳೆಯರು ಸ್ವಾವಲಂಭಿಯಾಗಿ ಜೀವನ ನಡೆಸಲು