ಬೆಂಗಳೂರು: ಕಿಯೋನಿಕ್ಸ್ ಅಕ್ರಮಗಳ ತನಿಖೆಗೆ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಅವ್ಯವಹಾರ ಆರೋಪದ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿ ರಚನೆ ಮಾಡಿದೆ. ಕಿಯೋನಿಕ್ಸ್ ತನಿಖೆ ನಡೆಸಲು ಹಣಕಾಸು ಹಾಗೂ ತಾಂತ್ರಿಕ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಅಧಿಕಾರವನ್ನು ತನಿಖಾ ಸಮಿತಿಯ ಮುಖ್ಯಸ್ಥರಿಗೆ ನೀಡಲಾಗಿದೆ.
ಕಿಯೋನಿಕ್ಸ್ ನಲ್ಲಿ ನಡೆದಿರುವ ಖರೀದಿಗಳು ಪಾರದರ್ಶಕವಾಗಿ ಹಾಗೂ ನಿಯಮಗಳಿಗೆ ಅನುಸಾರವಾಗಿ ಪರಿಶೀಲನೆ ಮಾಡಿ ತನಿಖೆ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. 2018 ರಿಂದ 23ರ ಅವಧಿಯಲ್ಲಿ ಕಿಯೋನಿಕ್ಸ್ ನಲ್ಲಿ ಭ್ರಷ್ಟಾಚಾರ ಸೇರಿದಂತೆ ಖರೀದಿ ಅವ್ಯಹಾರ ಆರೋಪಗಳ ಬಗ್ಗೆ ತನಿಖೆ ನಡೆಸಲು ನಿವೃತ್ತ ಐಎಎಸ್ ಅಧಿಕಾರಿ ಎಸ್ ಡಿ ಮೀನಾ ಅಧ್ಯಕ್ಷತೆಯಲ್ಲಿ ವಿಚಾರಣಾ ಸಮಿತಿ ರಚನೆ ಮಾಡಲಾಗಿದೆ.