ಬೆಂಗಳೂರು:- ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿ ಡಿ.31 ರಂದು ಕರೆ ನೀಡಿದ್ದ ಮುಷ್ಕರವನ್ನು ಹಿಂಪಡೆದು ಕೊಂಡಿದೆ.
ಬಾನುವಾರ ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಸಿದ್ದರಾಮಯ್ಯ ಜೊತೆಗೆ ಸಾರಿಗೆ ರಾಮಲಿಂಗಾರೆಡ್ಡಿ ಸಭೆ ನಡೆಸಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂಪಡೆಯಲು ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ತೀರ್ಮಾನಿಸಿದೆ.
ಇನ್ನೂ ನೌಕರರ ಹಲವು ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ ಕೊಟ್ಟ ಹಿನ್ನೆಲೆ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆ ಬೆನ್ನಲ್ಲೇ ಈ ನಿರ್ಧಾರಕ್ಕೆ ಬರಲಾಗಿದೆ. ಹೀಗಾಗಿ ನಾಳೆ ಎಂದಿನಂತೆ ಸಾರಿಗೆ ಸಂಸ್ಥೆ ಬಸ್ಗಳು ರಸ್ತೆಗಿಳಿಯಲಿವೆ.
ಹರಿಯರ್ಸ್ ಹಣ ಬಿಡುಗಡೆ, ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಅನಂತ್ ಸುಬ್ಬರಾವ್ ನೇತೃತ್ವದ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ಕೊಟ್ಟಿತ್ತು.
ಆದರೆ ಸಭೆಯಲ್ಲಿ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಭರವಸೆ ಕೊಟ್ಟ ಹಿನ್ನೆಲೆ ಮುಷ್ಕರ ವಾಪಸ್ ಪಡೆದಿದ್ದಾರೆ.