ಬೆಂಗಳೂರು: ರಾಜ್ಯದಲ್ಲಿ ಕನ್ನಡ ಭಾಷೆಯ ನಾಮಫಲಕಗಳಿಗೆ ಶೇ.60% ರಷ್ಟು ಬಳಕೆ ಕಡ್ಡಾಯದ ಸುಗ್ರೀವಾಜ್ಞೆಗೆ ಹಿನ್ನಡೆಯಾಗಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ವಾಪಾಸ್ ಕಳಿಸಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾದ್ಯಮಗಳೊಂದಿಗೆ ಪ್ರತಿಕ್ರಿಯಿಸಿ, ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆ ಕಡ್ಡಾಯ ಮಾಡಲು ಹೊರಡಿಸಿದ್ದ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ಮಾನ್ಯ ರಾಜ್ಯಪಾಲರಿಗೆ ಕಳಿಸಲಾಗಿತ್ತು. ಆದರೆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವ ಮುಂಚೆಯೇ ಅಧಿವೇಶನ ಪ್ರಾರಂಭವಾದ ಕಾರಣ ವಾಪಸ್ಸು ಕಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.