ಬೆಂಗಳೂರು: ಹೈಕಮಾಂಡ್ ಯಾರಿಗೆ ಸಚಿವ ಸ್ಥಾನ ಬಿಟ್ಟುಕೊಡಬೇಕು ಅನ್ನುತ್ತೋ ಅವರಿಗೆ ಬಿಟ್ಟು ಕೊಡುತ್ತೇನೆ. ಒಟ್ಟಿನಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parameshwar) ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಬಿಜೆಪಿ (BJP) ನಾಯಕರೂ ನಮ್ಮ ಬಗ್ಗೆ ಮಾತ್ರ ಮಾತಾಡ್ತಾರೆ. ಅವರ ಪಕ್ಷದ ವಿಚಾರವಾಗಿ ಹೆಚ್ಚು ತಲೆಕೆಡಿಸಿಕೊಳ್ಳಲ್ಲ.
ಅವರಿಗೆ ನಮ್ಮ ಪಕ್ಷದ ಮೇಲೆ ಹೆಚ್ಚು ಆಸಕ್ತಿ ಇದ್ದಂತೆ ಇದೆ. ಅವರೆಲ್ಲ ನಮ್ಮ ಪಕ್ಷಕ್ಕೆ ಬರ್ತಾರೇನೋ?. ಅದಕ್ಕಾಗಿ ನಮ್ಮ ಪಕ್ಷದ ಬಗ್ಗೆ ಹೆಚ್ಚು ಚರ್ಚೆ ನಡೆಸ್ತಿದ್ದಾರೇನೋ ಎಂದು ಪ್ರಶ್ನಿಸಿದರು. ಕಾಂಗ್ರೆಸ್ನಲ್ಲಿ ಇನ್ನೆರಡು ಡಿಸಿಎಂ ಸ್ಥಾನಗಳ ಸೃಷ್ಟಿಗೆ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೂರು ಡಿಸಿಎಂ ಚರ್ಚೆ ಹಳೇದಾಯ್ತು ಅನ್ಕೊಂಡಿದ್ದೆ. ಯಾರಿಗೆ ಯಾವ ಹುದ್ದೆ ಕೊಡಬೇಕು ಅಂತ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಯಾವ ಸಂದರ್ಭಸಲ್ಲಿ ಹುದ್ದೆ ಕೊಡಬೇಕು ಅಂತ ಹೈಕಮಾಂಡ್ ತೀರ್ಮಾನ ತಗೊಳ್ಳುತ್ತೆ ಎಂದು ತಿಳಿಸಿದರು.