ಬೆಂಗಳೂರು ;- ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ 2 ಸಂಗೀತ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ವಜಾ ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಎಫ್ಐಆರ್ ರದ್ದುಪಡಿಸಲು ನ್ಯಾ. ಎಂ. ನಾಗಪ್ರಸನ್ನ ಅವರ ನೇತೃತ್ವದ ಪೀಠ ನಿರಾಕರಿಸಿತು.
ಅರ್ಜಿದಾರರು ಅನುಮತಿ ಪಡೆಯದೇ ಸೋರ್ಸ್ ಕೋಡ್ ತಿರುಚಿದ್ದು, ಅದನ್ನು ಬಳಕೆ ಮಾಡಿರುವುದು ಅನುಮಾನರಹಿತವಾಗಿ ದೂರುದಾರರ ಕೃತಿಸ್ವಾಮ್ಯದ ಉಲ್ಲಂಘನೆಗೆ ಸಮನಾಗಿದೆ. ಅರ್ಜಿದಾರರು ದೂರುದಾರರ ಕೃತಿಸ್ವಾಮ್ಯವನ್ನು ಲಘುವಾದ ರೀತಿಯಲ್ಲಿ ಬಳಕೆ ಮಾಡಿದ್ದು, ಇದು ಮೇಲ್ನೋಟಕ್ಕೆ ಸಾಕ್ಷ್ಯ ಪರಿಶೀಲಿಸಬೇಕಾದ ಪ್ರಕರಣವಾಗಿದ್ದು, ತನಿಖೆಯಿಂದ ಹೊರಬರಬೇಕಿದೆ. ಹೀಗಾಗಿ, ಅರ್ಜಿ ವಜಾ ಮಾಡಲಾಗಿದೆ” ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.