ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ನ.26ಕ್ಕೆ ಸಿಬಿಐ ತನಿಖೆ ಭವಿಷ್ಯ ನಿರ್ಧಾರ ಆಗಲಿದೆ.
ಪ್ರಕರಣ ಸಂಬಂಧ ನಡೆದ ತನಿಖೆಯ ವರದಿಯನ್ನು ನವೆಂಬರ್ 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ.
ಸಿಬಿಐ, ಲೋಕಾಯುಕ್ತ ಪೊಲೀಸರು, ಪ್ರಕರಣದ ಎ1 ಸಿಎಂ ಸಿದ್ದರಾಮಯ್ಯ ಮತ್ತು ಎ2 ಪಾರ್ವತಿ ಅವರಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಅವಕಾಶ ನೀಡಿದೆ. ಸ್ನೇಹಪ್ರಿಯ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ.ರಾಘವನ್ ವಾದಮಂಡನೆ ಮಾಡಿದರು. ಮತ್ತು ಲೋಕಾಯುಕ್ತ ಪರವಾಗಿ ರಾಜ್ಯ ಅಭಿಯೋಜಕ ಬಿ.ಎನ್. ಜಗದೀಶ್ ವಾದ ಮಂಡಿಸಿದರು.
ವಿಚಾರಣೆಯಲ್ಲಿ ಲೋಕಾಯುಕ್ತ ಪೊಲೀಸ್, ಸಿಬಿಐ, ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ಪ್ರತಿವಾದಿಗಳಾಗಿದ್ದಾರೆ. ಒಂದು ವೇಳೆ ನ್ಯಾಯಾಲಯ ಸಿಬಿಐ ತನಿಖೆಗೆ ಆದೇಶಿಸಿದರೆ ಲೋಕಾಯುಕ್ತರ ತನಿಖೆ ಸ್ಥಗಿತಗೊಳ್ಳಲಿದೆ.