ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ ನೀಡಿದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಇತ್ತೀಚೆಗೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು.
ಜಮೀರ್ ಆಯ್ಕೆ ಪ್ರಶ್ನಿಸಿ ಅದೇ ಕ್ಷೇತ್ರದ ಮತದಾರರೊಬ್ಬರು ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ ನ್ಯಾಯಮೂರ್ತಿ.ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿತ್ತು.
ಇನ್ನು ನ್ಯಾಯಾಲಯ ಸುಪ್ರೀಂಕೋರ್ಟ್ನ ತೀರ್ಪು ಉಲ್ಲೇಖಿಸಿ “ಪ್ರಣಾಳಿಕೆಯಲ್ಲಿನ ಉಚಿತ ಕೊಡುಗೆಗಳಿಂದ ಮತದಾರರ ಮೇಲೆ ಪ್ರಭಾವ ಬೀರಬಹುದು. ಉಚಿತ ಕೊಡುಗೆಗಳಿಂದ ಪಕ್ಷಗಳ ನಡುವೆ ಸಮಾನತೆ ಇರುವುದಿಲ್ಲ. ಚುನಾವಣಾ ಆಯೋಗ ಈ ಬಗ್ಗೆ ಮಾರ್ಗಸೂಚಿ ರೂಪಿಸಬೇಕು. ಈ ಬಗ್ಗೆ ಸೂಕ್ತ ಶಾಸನ ರೂಪಿಸಬೇಕು ಎಂದು ಸುಪ್ರೀಂಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ ಎಂದು ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿ, ಆದೇಶ ಹೊರಡಿಸಿತ್ತು. ಇದೀಗ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೂ ತಡೆ ನೀಡಿದೆ.