ಹಾವೇರಿ: ಬಸ್ ಡಿಪೋದ ಆವರಣದಲ್ಲಿಯೇ ಸಾರಿಗೆ ನೌಕರ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರಿನ ಬಸ್ ಡಿಪೋದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಚಾಲಕ ಕಂ ನಿರ್ವಾಹಕನನ್ನ ಮಲ್ಲಿಕಾರ್ಜುನ ಬಡಿಗೇರ (49) ಎಂದು ಗುರುತಿಸಲಾಗಿದೆ. ಮೂಲತಃ ವಿಜಯಪುರ (Vijayapura) ಜಿಲ್ಲೆ ಮುದ್ದೇಬಿಹಾಳ ತಾಲೂಕು ದಾವಳಗಿ ಗ್ರಾಮದ ನಿವಾಸಿಯಾಗಿದ್ದ ಇವರು, ಕಳೆದ ಹತ್ತು ವರ್ಷದಿಂದ ಹಾವೇರಿ ಜಿಲ್ಲೆ ರಾಣೇಬೆನ್ನೂರು ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ಹೃದಯ ಆಪರೇಷನ್ ಸಹ ಆಗಿತ್ತು. ಕಳೆದ ಒಂದು ವಾರದಿಂದ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು ಎನ್ನಲಾಗಿದೆ. ಆದರೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ