ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ವಾಡಿಕೆಗಿಂತ ಮತ್ತಷ್ಟು ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನ ಹೆಚ್ಚಿನ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಗುರುವಾರ ರಾತ್ರಿ ಮಳೆಯಾಗಿದೆ. ಎಚ್ಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2ಡಿಗ್ರಿನ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.