ನವದೆಹಲಿ: ಸ್ತ್ರೀಯರ ಮೇಲೆ ಆ್ಯಸಿಡ್ ದಾಳಿಯಲ್ಲಿ ಮಹಾನಗರಗಳ ಪೈಕಿ ಬೆಂಗಳೂರು ಮೊದಲನೇ ಸ್ಥಾನವನ್ನು ಪಡೆದಿದೆ ಎಂಬ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಈ ಪೈಕಿ ನವದೆಹಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು, ಅಹಮದಾಬಾದ್ ಮೂರನೇ ಸ್ಥಾನವನ್ನು ಪಡೆದಿದೆ.
2022ರಲ್ಲಿ ಬೆಂಗಳೂರಿನಲ್ಲಿ ಒಟ್ಟು 8 ಆ್ಯಸಿಡ್ ದಾಳಿ ನಡೆದಿತ್ತು. ರಾಷ್ಟ್ರೀಯ ಅಪರಾಧಗಳ ದಾಖಲೆಗಳ ಬ್ಯೂರೋ ವರದಿಯಲ್ಲಿ ಆತಂಕಕಾರಿ ವಿಚಾರ ಬಯಲಾಗಿದೆ. ಎನ್ಸಿಆರ್ಬಿ ಬಿಡುಗಡೆ ಮಾಡಿದ ವರದಿ ಅನ್ವಯ ದೇಶದ 19 ಮಹಾನಗರಗಳ ಪೈಕಿ 2022ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ 8 ಆ್ಯಸಿಡ್ ದಾಳಿ ಪ್ರಕರಣಗಳು ದಾಖಲಾಗಿದ್ದು,
ಇದು ಆ ವರ್ಷದಲ್ಲಿ ದೇಶದಲ್ಲೇ ಅತಿ ಹೆಚ್ಚು ಪ್ರಕರಣವಾಗಿದೆ. 7 ಆ್ಯಸಿಡ್ ದಾಳಿ ಪ್ರಕರಣಗಳನ್ನು ದಾಖಲಿಸಿರುವ ದೆಹಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. 5 ಪ್ರಕರಣಗಳೊಂದಿಗೆ ಗುಜರಾತ್ನ ಅಹಮದಾಬಾದ್ 3ನೇ ಸ್ಥಾನದಲ್ಲಿದೆ. ಹೈದರಾಬಾದ್ನಲ್ಲಿ 2 ಆ್ಯಸಿಡ್ ದಾಳಿ ಯತ್ನ ಪ್ರಕರಣ ದಾಖಲಾಗಿತ್ತು. ಕಳೆದ ವರ್ಷ ಬೆಂಗಳೂರಿನಲ್ಲಿ ಯುವತಿಯ ಮೇಲಿನ ಆ್ಯಸಿಡ್ ದಾಳಿ ಭಾರೀ ಸುದ್ದಿಯಾಗಿತ್ತು.