ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ದರ್ಶನ್ರನ್ನು ನೋಡಲು ತಾಯಿ ಮೀನಾ, ಪತ್ನಿ ಮತ್ತು ಮಗ ಜೈಲಿಗೆ ಭೇಟಿ ನೀಡಿದ್ದು ಈ ವೇಳೆ ತಾಯಿಯನ್ನು ನೋಡ್ತಿದ್ದಂಗೆ ದರ್ಶನ್ ಕಣ್ಣೀರು ಹಾಕಿದ್ದಾರೆ.
ಇಂದು (ಜು.1) ಬೆಳಗ್ಗೆ ದರ್ಶನ್ ತಾಯಿ ಮೀನಾ, ತಮ್ಮ ದಿನಕರ್, ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರ ವಿನೀಶ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಗೆ ಮಾಧ್ಯಮಗಳ ಕಣ್ಣು ತಪ್ಪಿಸಲು ಖಾಸಗಿ ವಾಹನದಲ್ಲಿ ಬಂದ ದರ್ಶನ್ ಕುಟುಂಬ ಜೈಲಿನ ಒಳಗೆ ಹೋಗಿ ಭೇಟಿ ಮಾಡಿದೆ. ಮಗನ ಸ್ಥಿತಿ ನೋಡ್ತಿದ್ದಂತೆ ತಾಯಿ ಮೀನಾ ತೂಗುದೀಪ್ ಭಾವುಕರಾಗಿದ್ದಾರೆ. ದರ್ಶನ್ಗೆ ಸಹೋದರ ದಿನಕರ್ ಧೈರ್ಯ ತುಂಬಿದ್ದಾರೆ. ಮುಂದಿನ ಕಾನೂನು ಹೋರಾಟಕ್ಕೆ ಕುಟುಂಬಸ್ಥರ ಜೊತೆ ಚರ್ಚಿಸಿದ್ದಾರೆ.
ಇದೀಗ ಖಾಸಗಿ ವಾಹನದಲ್ಲೇ ದರ್ಶನ್ ಕುಟುಂಬ ಭೇಟಿ ನೀಡಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಬಂಧಿಖಾನೆ ಇಲಾಖೆ ಕಾನೂನನ್ನು ಗಾಳಿಗೆ ತೂರಿ ರಾಜಾತಿಥ್ಯ ನೀಡಿದೆ. ಸಾಮಾನ್ಯರು ಜೈಲಿಗೆ ಎಂಟ್ರಿ ಕೊಡಬೇಕಾದರೆ ಹತ್ತಾರು ರೂಲ್ಸ್ ಹೇಳುತ್ತಾರೆ. ಅದೇ ನಟ ದರ್ಶನ್ ಕುಟುಂಬಕ್ಕೆ ಮಾತ್ರ ಕಂಡಿಷನ್ ಇಲ್ಲವೆಂಬಂತಾಗಿದೆ ಎಂದು ಅನೇಕರು ಅಸಮಾಧಾನ ಹೊರ ಹಾಕಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೂನ್ 11ರಂದು ನಟ ದರ್ಶನ್ರನ್ನು ಬಂಧಿಸಲಾಯಿತು. ಜುಲೈ 4ರವರೆಗೂ ನ್ಯಾಯಾಂಗ ಬಂಧನದಲ್ಲಿಡಲಾಗಿದ್ದು ಮುಂದಿನ ನಡೆ ಏನಾಗಲಿದೆ ಎಂಬ ಕುತೂಹಲ ಪ್ರತಿಯೊಬ್ಬರಲ್ಲೂ ಶುರುವಾಗಿದೆ.