ಮೈಸೂರು: ಮುಡಾ ಹಗರಣ ವಿಚಾರವಾಗಿ ಜಟಾಪಟಿ ಜೋರಾಗುತ್ತಿದೆ. ಬೀದಿ ಹೋರಾಟವೇ ನಡೆದಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷಗಳು ರಣಕಹಳೆ ಮೊಳಗಿಸಿವೆ. ಮುಖ್ಯಮಂತ್ರಿ ಪರ ಸಾಲು ಸಾಲು ಸಚಿವರು ಅಖಾಡಕ್ಕಿಳಿದಿದ್ದಾರೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಎಫ್ಐಆರ್ ದಾಖಲಿಸಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ SP ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ. ಸಿಆರ್ಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಎಂದು ಕೋರ್ಟ್ ಆದೇಶ ನೀಡಿತ್ತು.
ಅದೇ ಕಾಯ್ದೆಯಡಿ ಇದೀಗ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಯಾವೆಲ್ಲಾ ಸೆಕ್ಷನ್ ದಾಖಲು ಮಾಡಲಾಗಿದೆ ಎನ್ನುವುದು ಇನ್ನಷ್ಟೇ ತಿಳಿದುಬರಬೇಕಿದೆ.