ಬೆಂಗಳೂರು ;– ಶೀಘ್ರವೇ ವಿಪಕ್ಷ ನಾಯಕರು ಹೆಸರು ಪ್ರಕಟವಾಗಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,ಕೇಂದ್ರ ಸಚಿವ ಮನ್ಸುಖ್ ಮಾಂಡವಿಯ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಹಿರಿಯರಾದ ವಿನೋದ್ ತಾವ್ಡೆ ಅವರು ಪ್ರಮುಖ ಪದಾಧಿಕಾರಿಗಳ ಅಭಿಪ್ರಾಯವನ್ನೂ ಸಂಗ್ರಹಿಸಿ ತೆರಳಿದ್ದಾರೆ. ಕೇಂದ್ರದಲ್ಲಿ ರಾಷ್ಟ್ರೀಯ ಅಧ್ಯಕ್ಷರು ಮತ್ತು ಇನ್ನೂ ಕೆಲವರ ಜೊತೆ ಚರ್ಚಿಸಿ ರಾಜ್ಯ ಅಧ್ಯಕ್ಷರು ಯಾರು ಮತ್ತು ಯಾರು ವಿಪಕ್ಷ ನಾಯಕರೆಂದು ಪಕ್ಷ ಪ್ರಕಟಿಸಲಿದೆ ಎಂದು ತಿಳಿಸಿದ್ದಾರೆ.
ಕೇಂದ್ರದ ವೀಕ್ಷಕರು ರಾಜ್ಯಾಧ್ಯಕ್ಷರ ಮತ್ತು ವಿಪಕ್ಷ ನಾಯಕರ ಕುರಿತು ಅಭಿಪ್ರಾಯ ಸಂಗ್ರಹಿಸಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಷ್ಟ್ರೀಯ ನಾಯಕರ ಜೊತೆ ಮಾತನಾಡಿ, ಕರ್ನಾಟಕಕ್ಕೆ ಹೆಸರುಗಳನ್ನು ಸೂಚಿಸಲಿದ್ದಾರೆ. ರಾಜ್ಯ ವಿಧಾನಸಭೆ ಮತ್ತು ಮೇಲ್ಮನೆಯ ವಿಪಕ್ಷ ನಾಯಕರ ಹೆಸರನ್ನು ತಿಳಿಸುತ್ತಾರೆ. ಶೀಘ್ರವೇ ವಿಪಕ್ಷ ನಾಯಕರು ಮತ್ತು ರಾಜ್ಯ ಅಧ್ಯಕ್ಷರ ಕುರಿತ ಮಾಹಿತಿ ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.