ಬೆಂಗಳೂರು ;- ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಶೀಘ್ರದಲ್ಲಿ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾರ್ಡ್ಗಳನ್ನು ಆದಷ್ಟು ಬೇಗ ನೀಡುವ ಪ್ರಕ್ರಿಯೆ ನಡೆಸಲಿದ್ದು, ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ ವಿತರಿಸಲಾಗುವುದು ಎಂದು ತಿಳಿಸಿದರು. ಹೊಸದಾಗಿ ಬಿಪಿಎಲ್ ಕಾರ್ಡ್ ಕೋರಿ 3 ಲಕ್ಷ ಅರ್ಜಿಗಳು ಬಂದಿವೆ. ಅದರಲ್ಲಿ ಕೆಲವರು ಪಡಿತರ ಬೇಡ ಆರೋಗ್ಯ ಯೋಜನೆಗಳ ಲಾಭಕ್ಕಾಗಿ ಪಡಿತರ ಚೀಟಿ ನೀಡಿ ಎಂದು ಕೋರಿದ್ದಾರೆ.
ಹಾಗಾಗಿ, ಇಂತಹವರಿಗೆ ಆದಷ್ಟು ಬೇಗ ಕಾರ್ಡ್ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಆರೋಗ್ಯ ಯೋಜನೆಗಾಗಿ ಕಾರ್ಡ್ ಬಯಸುವವರಿಗೆ ಬಿಪಿಎಲ್ಎಬಿ ಎಂದು ನಮೂದಿಸಿ ಕಾರ್ಡ್ ನೀಡುವ ಚಿಂತನೆ ಇದೆ. ಇಂತಹವರಿಗೆ ಪಡಿತರ ಯೋಜನೆ ಲಾಭ ಇರುವುದಿಲ್ಲ. ಆದರೆ, ಆರೋಗ್ಯ ಯೋಜನೆಗೆ ಸಂಬಂಧಿಸಿದಂತೆ ಈ ಬಿಪಿಎಲ್ ಕಾರ್ಡ್ ಅನ್ನು ಬಳಸಿಕೊಳ್ಳಬಹುದು. ಆರೋಗ್ಯ ಯೋಜನೆಗಾಗಿಯೇ ಬಿಪಿಎಲ್ ಕಾರ್ಡ್ ವಿತರಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳುವುದಾಗಿಯೂ ಅವರು ತಿಳಿಸಿದರು.
ಇದನ್ನೂ ಓದಿ : ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ಫುಲ್ ರಶ್: ಚಿಕಿತ್ಸೆಗೆಂದು ಹೊರ ಊರಿನಿಂದ ಬರುತ್ತಿರುವ ಜನ..!
![Demo](https://prajatvkannada.com/wp-content/uploads/2023/08/new-Aston-Band.jpeg)