ಬೆಂಗಳೂರು: ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾಗ ಅತೀಕ್ ಅವರು ಬಜೆಟ್ ಪುಸ್ತಕಗಳಿರುವ ಬ್ರೀಫ್ ಕೇಸನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು. ಹಣಕಾಸು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. 14ನೇ ಬಾರಿ ಬಜೆಟ್ ಮಂಡಿಸುವ ಮೂಲಕ ದಾಖಲೆ ಮಾಡಲಿದ್ದಾರೆ. ಇನ್ನು ಬಜೆಟ್ನಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಭರವಸೆ ಈಡೇರಿಸುವ ಸಾಧ್ಯತೆಯಿದೆ.