ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್, ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ದಟ್ಟ ಮಂಜಿನಿಂದಾಗಿ ಪತನವಾಗಿದೆ ಎಂದು ಇರಾನ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಅಜರ್ಬೈಜಾನ್ನ ಗಡಿಗೆ ಭೇಟಿ ನೀಡಿ ಹಿಂತಿರುಗುವ ಮಾರ್ಗದಲ್ಲಿ ದಟ್ಟ ಮಂಜಿನಲ್ಲಿ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ಅಪಘಾತಕ್ಕೀಡಾಗಿದೆ ಎನ್ನಲಾಗುತ್ತಿದೆ.
ಹೆಲಿಕಾಪ್ಟರ್ ಅಪಘಾತದಿಂದಾಗಿ ರೈಸಿ ಮತ್ತು ವಿದೇಶಾಂಗ ಸಚಿವ ಹೊಸೈನ್ ಅಮಿರಾಬ್ದೊಲ್ಲಾಹಿಯಾನ್ ಅವರು ಅಪಾಯದಲ್ಲಿದ್ದಾರೆ. ಅವರಿಗೆ ಏನೂ ಆಗಿಲ್ಲ ಎಂಬ ಭರವಸೆಯಲ್ಲಿದ್ದೇವೆ. ಆದರೆ ಅಪಘಾತದ ಸ್ಥಳದ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
ಕೆಟ್ಟ ಹವಾಮಾನವು ರಕ್ಷಣಾ ಪ್ರಯತ್ನಗಳನ್ನು ಸಂಕೀರ್ಣಗೊಳಿಸುತ್ತಿದೆ. ಭಾರೀ ಮಂಜಿ ಇರುವ ಪರ್ವತ ಪ್ರದೇಶದಲ್ಲಿ ರಕ್ಷಣಾ ತಂಡಗಳು ಕಾಲ್ನಡಿಗೆಯಲ್ಲಿ ಹುಡುಕಾಟದಲ್ಲಿ ಕಾರ್ಯನಿರತವಾಗಿವೆ. ದೇಶದಾದ್ಯಂತ ರೈಸಿಗಾಗಿ ಪ್ರಾರ್ಥಿಸಲಾಗುತ್ತಿದೆ.
63 ವಯಸ್ಸಿನ ರೈಸಿ 2021 ರಲ್ಲಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅಧಿಕಾರ ವಹಿಸಿಕೊಂಡಾಗಿನಿಂದ ನೈತಿಕತೆಯ ಕಾನೂನುಗಳನ್ನು ಬಿಗಿಗೊಳಿಸುವಂತೆ ಆದೇಶಿಸಿದ್ದರು.