ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು(ಜೂನ್ 15) ನಡೆದ ಸಚಿವ ಸಂಪುಟದಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದ್ದು, ಈ ಪೈಕಿ ಮತಾಂತರ ನಿಷೇಧ ಕಾಯ್ದೆಗೂ ತಿದ್ದುಪಡಿ ತರಲು ಮತ್ತು ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದೆ. ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ.
ಸಚಿವ ಸಂಪುಟ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್ಕೆ ಪಾಟೀಲ್, ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿದರು.