ಮೈಸೂರು : ಲವರ್ ಗೆ ಮೆಸೇಜ್ ಮಾಡಿದ ರೂಂ ಮೇಟ್ ಗೆ ಚಾಕು ಇರಿದಿರುವ ಘಟನೆ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ನಡೆದಿದೆ. ಶಿವಕುಮಾರ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಯುವಕ. ಶಿವಕುಮಾರ್ ಹಾಗೂ ಶ್ರೇಯಸ್ ಇಬ್ಬರು ರೂಮ್ ಮೇಟ್ ಗಳಾಗಿದ್ದರು. ಸ್ನೇಹಿತನ ಲವರ್ ಜೊತೆ ಸಂಪರ್ಕ ಬೆಳೆಸಿದ ಶಿವಕುಮಾರ್ ಆಕೆಯ ಜೊತೆ ಚಾಟ್ ಮಾಡುತ್ತಿದ್ದ.
ಈ ವಿಚಾರ ಶ್ರೇಯಸ್ ಗೆ ಗೊತ್ತಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದೆ. ಲವರ್ ತಂಟೆಗೆ ಬಾರದಂತೆ ಶಿವಕುಮಾರ್ ಗೆ ಎಚ್ಚರಿಕೆ ನೀಡಿದ್ದನ್ನು. ಹೀಗಿದ್ದೂ ಶಿವಕುಮಾರ್ ಆಗಾಗ ಪ್ರಿಯಾಗೆ ಮೆಸೇಜ್ ಮಾಡುತ್ತಿದ್ದ. ಇದೇ ವಿಚಾರವಾಗಿ ನಂಜನಗೂಡು ರಿಂಗ್ ರಸ್ತೆ ಬಳಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಶಿವಕುಮಾರ್ ಗೆ ಶ್ರೇಯಸ್ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.