ಬೆಂಗಳೂರು ;- ಮಹಾರಾಷ್ಟ್ರದಲ್ಲಿ ಆದ ಸ್ಥಿತಿಯೇ ಕರ್ನಾಟಕದಲ್ಲಿಯೂ ಆಗಲಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಆದ ಸ್ಥಿತಿಯೇ ಕರ್ನಾಟಕದಲ್ಲಿಯೂ ಆಗಲಿದೆ, ಇನ್ನು ಮೂರು ತಿಂಗಳು ಕಾದು ನೋಡಿ. ಮಹಾರಾಷ್ಟ್ರದ ರಾಜಕೀಯದ ರೀತಿ ಅಜಿತ್ ಪವಾರ್ ತರದ ನಾಯಕನೊಬ್ಬ ಕಾಂಗ್ರೆಸ್ ನಲ್ಲಿಯೇ ಹುಟ್ಟುತ್ತಾನೆ ಎಂದರು. ನಾವು ಸುಳ್ಳು ಗ್ಯಾರೆಂಟ್ ಕೊಟ್ಟು ಜನರಿಗೆ ಮೋಸ ಮಾಡಿದ್ದೇವೆ ಎಂದು ಕಾಂಗ್ರೆಸ್ ಶಾಸಕರಿಗೆ ಬೇಸರ ಇದೆ ಎಂದು ಹೇಳಿದರು.
ಇನ್ನು ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯುವ ವಿಚಾರವಾಗಿ ಮಾತನಾಡಿ, ಅವರು ನಾವು ಮಾಡಿದ ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆ ಹಿಂದೆ ಪಡೆಯುವ ಬಗ್ಗೆ ಕಾಂಗ್ರೆಸ್ ಸರ್ಕಾರ ಹೇಳಿದೆ. ಹಿಂಪಡೆಯುವ ಪ್ರಯತ್ನ ಮಾಡಿದ್ರೇ ಹಿಂದೂ ಸಮಾಜದ ಎಲ್ಲಾ ಸ್ವಾಮೀಜಿಗಳು ಹೋರಾಟಕ್ಕೆ ಇಳಿಯುವ ಸೂಚನೆ ನೀಡಿದ್ದಾರೆ. ಈ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಸದ್ಯಕ್ಕೆ ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆಗಳನ್ನು ವಾಪಸ್ ಪಡೆಯಲ್ಲ ಎಂದರು.