ಬೆಂಗಳೂರು: ಒಬ್ಬ ಶಾಸಕನಾಗಿ ಸರ್ಕಾರದ ಲೋಪದೋಷ ಬಗ್ಗೆ ಚರ್ಚಿಸ್ತೇನೆ. ವಿಪಕ್ಷ ನಾಯಕನಾಗಿ ಈ ಸರ್ಕಾರವನ್ನು ಟೀಕಿಸುತ್ತಿಲ್ಲ ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ ಏನು ಭರವಸೆ ಕೊಟ್ರಿ. ಆ ಭರವಸೆಗಳನ್ನು ಯಾವ ರೀತಿ ಈಡೇರಿಸಲು ಹೊರಟ್ಟಿದ್ದೀರಿ. ಈ ಸರ್ಕಾರ ICUಗೆ ಹೋಗುವ ಕಾಲ ಬರುತ್ತೆ ಎಂದು ಅನಿಸುತ್ತೆ. ಐಸಿಯು, ವೆಂಟಿಲೇಟರ್ ಮೇಲೆ ಈ ಸರ್ಕಾರ ನಡೆಯಬಹುದು.
ಆರ್ಥಿಕ ಪರಿಸ್ಥಿತಿ ಆ ಮಟ್ಟಕ್ಕೆ ಹೋಗಲಿದೆ. ಮುಂದಿನ 5 ವರ್ಷಕ್ಕೆ ಏನು ಕೊಡಬೇಕೆಂಬ ಆತ್ಮವಿಶ್ವಾಸವೇ ಇಲ್ಲ. ರಾಜ್ಯಪಾಲರ ಭಾಷಣ ವೇಳೆ ಶಾಸಕರು ಮೇಜು ಕುಟ್ಟಿದ್ದು ನೋಡಿಲ್ಲ ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.