ನವಿಲನ್ನೇ ಕೊಂದು ಅದರ ಮಾಂಸದ ಸಾರು ಮಾಡುವ ರೆಸಿಪಿಯನ್ನು ಯೂಟ್ಯೂಬ್ನಲ್ಲಿ ಪ್ರಕಟಿಸಿದ ಯೂಟ್ಯೂಬರ್ನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲಪಲ್ಲಿ ಗ್ರಾಮದ ಕೊಡಂ ಪ್ರಣಯ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಯೂಟ್ಯೂಬನಲ್ಲಿ ನವಿಲು ಸಾಂಬಾರಿನ ಸಂಪ್ರದಾಯಿಕ ವಿಧಾನ ಎಂದು ಶೀರ್ಷಿಕೆ ನೀಡಿ ಯೂಟ್ಯೂಬ್ನಲ್ಲಿ ವೀಡಿಯೋ ಪೋಸ್ಟ್ ಮಾಡಿದ್ದ.
ಈ ವೀಡಿಯೋ ನಂತರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಈತನ ಕೃತ್ಯದ ಬಗ್ಗೆ ವ್ಯಾಪಕ ಆಕ್ರೋಶ ಕೇಳಿ ಬಂದಿತ್ತು. ಇದಾದ ನಂತರ ವಿಚಾರ ತಿಳಿದ ಪೊಲೀಸರು ಆತನ ವಿರುದ್ಧ ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ರೀತಿ ಕೃತ್ಯವೆಸಗುವ ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯ ಎಸ್ಪಿ ಅಖಿಲ್ ಮಹಾಜನ್ ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.