ಬೆಂಗಳೂರು: ಹಿರಿಯ ನಟಿ ಲೀಲಾವತಿಯವರ ನಿಧನಕ್ಕೆ ವಿಧಾನಪರಿಷತ್ನಲ್ಲಿ ಸಂತಾಪ ಸೂಚಿಸಲಾಯಿತು. ಕಲಾಪ ಪ್ರಾರಂಭವಾದ ತಕ್ಷಣ ಉಪಸಭಾಪತಿಗಳು ಸಂತಾಪ ಸೂಚನೆ ಓದಿದರು. ಇದಕ್ಕೆ ಸಭಾ ನಾಯಕರ ಬೋಸರಾಜು, ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿಯವರು ಸಹ ದನಿಗೂಡಿಸಿದರು.
ಸಂತಾಪ ಸೂಚನೆ ವೇಳೆ ಮಾತನಾಡಿದ ನಟಿ ಹಾಗೂ ಪರಿಷತ್ ಸದಸ್ಯೆ ಉಮಾಶ್ರೀ , ಲೀಲಾವತಿಯವರು ಬಾಲ್ಯದಿಂದ ಸಾವಿನವರೆಗೂ ಸಂಘರ್ಷದ ಜೀವನ ಮಾಡಿಕೊಂಡು ಬಂದವರು. ಇಷ್ಟು ಸಂಘರ್ಷಗಳನ್ನು ಜಯಿಸಿಕೊಂಡು ಬಂದಿದ್ದರು. ಲೀಲಾವತಿ ಮಾಡದ ಪಾತ್ರಗಳೇ ಇಲ್ಲ. ನಾವು ನಟರಾಗಿದ್ದರು ಅವರ ನಟನೆಗೆ ಸಾಟಿ ಅಲ್ಲ. ಪಾತ್ರಕ್ಕೆ ತಕ್ಕ ನ್ಯಾಯ ಹಾಗೂ ಪೋಷಣೆಯನ್ನು ಅವರು ಒದಗಿಸುತ್ತಿದ್ದರು ಎಂದು ಲೀಲಾವತಿಯವರ ಗುಣಗಾನ ಮಾಡಿದ್ದಾರೆ.
ಸೋಲದೇವನಹಳ್ಳಿಯಲ್ಲಿ ಅವರು ಮಾಡಿದ ಸೇವೆ ಅಲ್ಲಿನ ಜನರು ಹೇಳುತ್ತಾರೆ. ಅಂತಹ ತಾಯಿಯ ಸೇವೆಯನ್ನು ಪುತ್ರ ವಿನೋದ್ ರಾಜ್ ಮಾಡಿದ್ದಾರೆ. ವಿನೋದ್, ತಾಯಿಗೆ ತಕ್ಕ ಮಗ, ಲೀಲಾವತಿಯವರೂ ಸಹ ಮಗನಿಗೆ ತಕ್ಕ ತಾಯಿ ಎಂದು ಅವರು ಹೇಳಿದ್ದಾರೆ.