ಬೆಂಗಳೂರು:- ಸಂವಿಧಾನ ಬದಲಿಸುವ ಹುನ್ನಾರ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಸಮಾಜದಲ್ಲಿ ಬದಲಾವಣೆ ಒಪ್ಪದೆ ಅಸಮಾನತೆ ಪೋಷಿಸುವವರು, ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದರು.
ಎಲ್ಲರಿಗೂ ಸಮಾನ ಅವಕಾಶ ಲಭಿಸಿ ಸಮಾಜದಲ್ಲಿ ಬದಲಾವಣೆಯಾಗಬಾರದು. ಯಾರೋ ದುಡಿದಿದ್ದನ್ನು ತಾವು ಕುಳಿತು ತಿನ್ನಬೇಕು ಎಂದು ಬಯಸುವವರು ಈಗಲೂ ನಮ್ಮ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ.
ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಅಭಿಪ್ರಾಯಪಟ್ಟರು. ಸಮಾಜದ ಬದಲಾವಣೆಗೆ ಒಪ್ಪದೆ ಅಸಮಾನತೆ ಪೋಷಿಸುವವರು ಬಹಳ ಅಪಾಯಕಾರಿ. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬಾರದು ಎಂದು ಇವರು ಬಯಸುತ್ತಾರೆ. ನಮ್ಮ ಸಂವಿಧಾನ ಬದಲಾಯಿಸಬೇಕು ಎಂದು ಹುನ್ನಾರ ನಡೆಸುತ್ತಿದ್ದಾರೆ. ಇವರ ಬಗ್ಗೆ ಎಚ್ಚರದಿಂದ ಇರಬೇಕು. ಇವರ ಆಶಯಗಳು ನಾಶವಾಗುವಂತೆ ನಾವು ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.