ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ,ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು,
ಸಂಜೆಯ ವೇಳೆಗೆ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಕಲಬುರಗಿಯಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನು ಚಾಮರಾಜನಗರದಲ್ಲಿ 1 ಸೆಂ. ಮೀ ಮಳೆ ಆಗಿರುವುದು ವರದಿ ಆಗಿದೆ. ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.