ಮಂಗಳೂರು: ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದೂಗಳಿಗೆ (Hindu) ಕಠಿಣ ದಿನವಾಗಲಿದೆ. ಗೋಹತ್ಯೆ ಕಾಯ್ದೆ, ಮತಾಂತರ ಕಾಯ್ದೆ ನಿಷೇಧಕ್ಕೆ ಕಾರ್ಯತಂತ್ರಗಳು ರೂಪುಗೊಂಡಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ (Mangaluru) ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪೊಲೀಸರಿಗೆ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ.
ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿರೋದು ಕಂಡು ಬಂದಿದೆ. ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧ ಇಲ್ಲ. ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ. ಅವರ ಖಾಸಗಿ ಜೀವನದಲ್ಲಿ ಅವರ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿಕೆಶಿ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ, ಅವರು ತಮ್ಮ ಮಾತನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.
ಚಿತ್ರದುರ್ಗ ಜಿಲ್ಲೆಯ ಶಿಕ್ಷಕರು ಮುಖ್ಯಮಂತ್ರಿಗಳ ಸಾಲದ ಬಗ್ಗೆ ಮಾತನಾಡಿದ್ದಕ್ಕೆ ಅಮಾನತು ಮಾಡಲಾಗಿದೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಸರ್ಕಾರದಲ್ಲಿ ದ್ವೇಷ ಸಾಧಿಸೋ ವಾತಾವರಣ ಕಂಡು ಬರುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಶೋಭೆ ತರಲ್ಲ. ಅದನ್ನು ಪುನರ್ ಪರಿಶೀಲಿಸಲಿ ಎಂದರು. ಸಿದ್ದರಾಮಯ್ಯ ಮತ್ತು ಡಿಕೆಶಿ 40% ಕಮಿಷನ್ ತನಿಖೆ ಮಾಡುತ್ತೇವೆ ಎಂದಿದ್ದಾರೆ. ಈ ತನಿಖೆಯನ್ನು ಮುಕ್ತವಾಗಿ ನಾನು ಸ್ವಾಗತ ಮಾಡುತ್ತೇನೆ. ನನ್ನಿಂದಲೇ ತನಿಖೆ ಪ್ರಾರಂಭವಾಗಲಿ. ಇಡೀ ತನಿಖೆ ಮಾಡಲಿ, ಯಾವ ತನಿಖೆಯಲ್ಲಿ ಏನಾಗುತ್ತೆ ನೋಡೋಣ. ವ್ಯಕ್ತಿಗತ ದ್ವೇಷಕ್ಕೆ ಅವಕಾಶ ಕೊಡಬಾರದು. ಆದರೂ ತನಿಖೆ ಮಾಡಲಿ ಎಂದು ತಿರುಗೇಟು ನೀಡಿದರು.