ಬೆಳಗಾವಿ: ನನ್ನ ಕ್ಷೇತ್ರದ ಪ್ರತಿಯೊಬ್ಬರಿಗೂ ಗ್ಯಾರಂಟಿ ಯೋಜನೆ ತಲುಪಬೇಕು. ನಮ್ಮ ಪಕ್ಷದ ನಾಯಕರು ನನಗೆ ಸಚಿವ ಸ್ಥಾನ ನೀಡಿದ್ದಾರೆ. ಕಷ್ಟ ಬರಲಿ, ಸುಖ ಬರಲಿ ಮನೆ ಮಗಳಂತೆ ಕೆಲಸ ಮಾಡಿದ್ದೇನೆ. ಗ್ರಾಮೀಣ ಕ್ಷೇತ್ರದ ಮನೆ ಮಗಳಾಗಿ ಜವಾಬ್ದಾರಿ ನಿಭಾಯಿಸುವೆ. ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಸರಿಯುವ ಮಾತೇ ಇಲ್ಲ.
ಮನೆ ಯಜಮಾನಿಗೆ ಹಣ ನೀಡುವ ಯೋಜನೆ ನನ್ನ ಇಲಾಖೆಯಲ್ಲಿದೆ. ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಣ ಹಾಕುವುದು ನನ್ನ ಜವಾಬ್ದಾರಿ. ಮಹಿಳೆಯರು ಮುಖ್ಯವಾಹಿನಿಗೆ ಬರಬೇಕೆಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಕನಸು ಎಂದು ಅಭಿನಂದನಾ ಸಮಾರಂಭದಲ್ಲಿ (Lakshmi Hebbalkar)ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.